ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಸೋಮಣ್ಣ ವಿರುದ್ಧದ ಆಕ್ರಮ ಆಸ್ತಿ ಪ್ರಕರಣದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ರಾಮಕೃಷ್ಣ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ದೂರುದಾರರು ಮಾಡಿರುವ ಆರೋಪಕ್ಕೆ ಸೂಕ್ತ ದಾಖಲೆ ಸಲ್ಲಿಸಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ತಿರಸ್ಕರಿಸಿದೆ. 2013ರಲ್ಲಿ ರಾಮಕೃಷ್ಣ ಖಾಸಗಿ ದೂರು ನೀಡಿದ್ದರು. ಆದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿಲ್ಲ. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ದೂರುದಾರರ ಆರೋಪಕ್ಕೆ ಪೂರಕ ಸಾಕ್ಷ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.