ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದ್ದು, , ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ನಿನ್ನೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.