2019ರಲ್ಲಿ ಹಳದಿ ಸೀರೆಯನ್ನು ಧರಿಸಿ ಮತಗಟ್ಟೆಗೆ ಆಗಮಿಸಿದ ನಂತರ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ರೀನಾ ದ್ವಿವೇದಿ ನಿಮಗೆ ನೆನಪಿದೆಯೇ..? ಅಂದಹಾಗೆ, ಆಕೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತಗಟ್ಟೆ ಅಧಿಕಾರಿಗಳಲ್ಲಿ ಒಬ್ಬರು, ಕಪ್ಪು ಟಾಪ್ ಮತ್ತು ಬೀಜ್ ಪ್ಯಾಂಟ್ ಧರಿಸಿ ಮತಗಟ್ಟೆಗೆ ಆಗಮಿಸಿರುವ ಫೋಟೋ ವೈರಲ್ ಆಗಿದೆ. ಲಕ್ನೋದ ಬಸ್ತಿಯಾ, ಗೋಸೈಗಂಜ್ ಬೂತ್ ಸಂಖ್ಯೆ 114 ರಲ್ಲಿ ರೀನಾ ಮತದಾನ ಕೇಂದ್ರಕ್ಕೆ ಆಗಮಿಸುತ್ತಿರುವ ಫೋಟೋ ಕ್ಲಿಕ್ ಮಾಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳಲ್ಲಿ ರೀನಾ ದ್ವಿವೇದಿ ಮತಗಟ್ಟೆಗೆ ತೆರಳುತ್ತಿರುವುದು ಕಂಡುಬಂದಿದೆ. ಆಕೆಯ ಬದಲಾವಣೆಯ ಬಗ್ಗೆ ಕೇಳಿದಾಗ ಸ್ವಲ್ಪ ಬದಲಾವಣೆ ಮಾಡಬೇಕಾಗುತ್ತದೆ ಎಂದು ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.
2019 ರಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯ ಫೋಟೋ ವೈರಲ್ ಆಗಿತ್ತು. ಹಳದಿ ಬಣ್ಣದ ಸೀರೆಯನ್ನು ಧರಿಸಿ, ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಸಹೋದ್ಯೋಗಿಯೊಬ್ಬರು ಫೋಟೋ ಕ್ಲಿಕ್ ಮಾಡಿದ್ದರು. ತಮ್ಮ ಫೋಟೋಗಳು ವೈರಲ್ ಆದ ನಂತರ ಇಂಟರ್ನೆಟ್ ಸೆನ್ಸೇಷನ್ ಆಗಿರುವ ರೀನಾ ದ್ವಿವೇದಿ ರಿಯಾಲಿಟಿ ಶೋ ಬಿಗ್ ಬಾಸ್ನಲ್ಲಿ ಭಾಗವಹಿಸಲು ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ. ರೀನಾ ದ್ವಿವೇದಿ ಇನ್ಸ್ಟಾಗ್ರಾಮ್ನಲ್ಲಿ 2 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.