alex Certify ರಾಮನಗರ ಜಿಲ್ಲೆಗೆ ಮರು ನಾಮಕರಣ : ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮನಗರ ಜಿಲ್ಲೆಗೆ ಮರು ನಾಮಕರಣ : ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ..!

ಬೆಂಗಳೂರು : ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಡಿಸಿಎಂ ಡಿಕೆಶಿ, ರಾಮನಗರ ಜಿಲ್ಲಾ ಉಸ್ತುವಾರಿಗಳಾದ ರಾಮಲಿಂಗಾ ರೆಡ್ಡಿ, ಮಾಜಿ ಸಂಸದರಾದ ಡಿಕೆ ಸುರೇಶ್ ಹಾಗೂ ಶಾಸಕರಾದ ಇಕ್ಬಾಲ್ ಹುಸೇನ್ ಮಾನ್ಯ ಮುಖ್ಯಮಂತ್ರಿಗಳನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿದೆವು. ಸಿಎಂ ಅವರೂ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು.

ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್ನಲ್ಲಿಟ್ಟು ಚರ್ಚೆ ಮಾಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...