ಬೆಂಗಳೂರು: ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಇದರಿಂದಾಗಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗಲಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ಜೂನ್ 2 ರಂದು ಮಾದರಿ ಬಾಡಿಗೆದಾರಿಕೆ ಅಧಿನಿಯಮ ಕಾನೂನು ಜಾರಿಗೆ ತಂದಿದ್ದು, ರಾಜ್ಯದಲ್ಲಿಯೂ ಇದನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ, ಸೂಚನೆ ಆಹ್ವಾನಿಸಿದ ನಂತರ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಇರುವ ಕಾನೂನಿನಿಂದ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು ಎರಡು ಲಕ್ಷದಷ್ಟು ಮನೆಗಳು ಬಾಡಿಗೆ ಇಲ್ಲದೆ ಖಾಲಿ ಉಳಿದಿವೆ. ಹೀಗಾಗಿ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗುವಂತೆ ಹೊಸ ಕಾನೂನು ಜಾರಿಗೊಳಿಸಲಾಗುವುದು. ಇದರಿಂದ ಬಾಡಿಗೆದಾರರು, ಮನೆಮಾಲೀಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.