ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ರೇಣುಕಾಚಾರ್ಯ ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದಾಖಲಿಸಲಾಗಿದೆ. ಏಪ್ರಿಲ್ 2 ರಂದು ರೇಣುಕಾಚಾರ್ಯ ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದರು. ಸಭೆ ನಡೆಯುವ ವೇಳೆಯಲ್ಲೇ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಸಭೆಯನ್ನು ನಿಲ್ಲಿಸಿದ್ದರು. ಚುನಾವಣಾ ಅಧಿಕಾರಿ ವಿಜಯ್ ದೂರಿನ ಮೇರೆಗೆ ರೇಣುಕಾಚಾರ್ಯ ಹಾಗೂ ಸಂತೋಷ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.