ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಉಪ್ಪು, ಹುಳಿ, ಖಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟೀಕಿಸಿರುವುದಕ್ಕೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.
ರುಚಿ ಗೊತ್ತಾಗದಿರುವುದು ಕೋವಿಡ್-19 ಲಕ್ಷಣಗಳಲ್ಲಿ ಒಂದಾಗಿದೆ. ಹಾಗಾಗಿ ನೀವು ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ರೇಣುಕಾಚಾರ್ಯ ಟಾಂಗ್ ಕೊಟ್ಟಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದು ಹುಳಿ, ಖಾರವಿಲ್ಲದ ಬಜೆಟ್ ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದು, ರುಚಿ ಗೊತ್ತಾಗುತ್ತಿರುವುದು ಕೊರೊನಾ ಲಕ್ಷಣ. ನೀವು ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ. ಈ ಬಗ್ಗೆ ತಿಳಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆ ಮಾಡಿ ಪ್ರಶಂಸಿಸಿದ್ದಾರೆ.