alex Certify ರೇಣುಕಾಚಾರ್ಯ ಸೋದರನ ಪುತ್ರ ಚಂದ್ರು ಶವ ಪತ್ತೆ ಬೆನ್ನಲ್ಲೇ ಹತ್ತಾರು ಶಂಕೆ: ಕಾರ್ ನಲ್ಲಿದ್ದ ಮತ್ತೊಬ್ಬ ಯಾರು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಚಾರ್ಯ ಸೋದರನ ಪುತ್ರ ಚಂದ್ರು ಶವ ಪತ್ತೆ ಬೆನ್ನಲ್ಲೇ ಹತ್ತಾರು ಶಂಕೆ: ಕಾರ್ ನಲ್ಲಿದ್ದ ಮತ್ತೊಬ್ಬ ಯಾರು…?

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಾರ್ ತುಂಗಾ ಮೇಲ್ದಂಡೆ ನಾಲೆಯಲ್ಲಿ ಪತ್ತೆಯಾಗಿದೆ.

ಚಂದ್ರಶೇಖರ್ ಶವ ಪತ್ತೆಯಾದ ಬೆನ್ನಲ್ಲೇ ಹತ್ತಾರು ಅನುಮಾನಗಳು ವ್ಯಕ್ತವಾಗಿವೆ. ಕಾರ್ ನಲ್ಲಿ ಚಂದ್ರಶೇಖರ್ ಜೊತೆಗೆ ಮತ್ತೊಬ್ಬರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಕಾರ್ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ. ಆದರೆ, ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳು ಕಾರ್ ಮುಂಭಾಗದಲ್ಲಿ ಇಬ್ಬರು ಕುಳಿತುಕೊಂಡಿರುವುದು ಕಂಡು ಬಂದಿದೆ.

ಚಂದ್ರು ಜೊತೆಗೆ ಕಾರ್ ನಲ್ಲಿ ಮತ್ತೊಬ್ಬರು ಪ್ರಯಾಣಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆದರೆ ನಾಲೆಯಲ್ಲಿ ಪತ್ತೆಯಾಗಿರುವ ಕಾರ್ ನಲ್ಲಿ ಚಂದ್ರಶೇಖರ್ ಮೃತ ದೇಹ ಮಾತ್ರ ಕಂಡುಬಂದಿದೆ. ಭಾನುವಾರದಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಹೊನ್ನಾಳಿಯಿಂದ 5 ಕಿಲೋ ಮೀಟರ್ ದೂರದಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ವಿಧಿ ವಿಜ್ಞಾನ ತಂಡದವರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹೊನ್ನಾಳಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...