ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ ಉಂಟಾಗಿದ್ದು, ಶಾಸಕ ಎಂ.ಪಿ. ರೇಣುಕಾಚಾರ್ಯ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಮೆಡಿಕಲ್ ಆಕ್ಸಿಜನ್ ಕೊರತೆ ಉಂಟಾಗಿರುವ ಬಗ್ಗೆ ತಾಲೂಕು ಆಸ್ಪತ್ರೆಯ ವೈದ್ಯರು ಶಾಸಕ ರೇಣುಕಾಚಾರ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ರಾತ್ರೋರಾತ್ರಿ ಭದ್ರಾವತಿ ಮತ್ತು ಹರಿಹರಕ್ಕೆ ತೆರಳಿದ ರೇಣುಕಾಚಾರ್ಯ ಆಕ್ಸಿಜನ್ ವ್ಯವಸ್ಥೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯಿಂದ 20 ದಾವಣಗೆರೆ ಜಿಲ್ಲೆ ಹರಿಹರದಿಂದ 5 ಆಕ್ಸಿಜನ್ ಸಿಲಿಂಡರ್ ಗಳನ್ನು ತಂದು ಅನಾಹುತ ತಪ್ಪಿಸಿದ್ದಾರೆ. ಕಳೆದ ವಾರವೂ ಆಕ್ಸಿಜನ್ ವ್ಯವಸ್ಥೆ ಮಾಡಿ ಸೋಂಕಿತರನ್ನು ರಕ್ಷಿಸಿದ್ದರು.