alex Certify BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ದರ್ಶನ್ & ಗ್ಯಾಂಗ್ ನಿಂದ 139 ವಸ್ತುಗಳು ಜಪ್ತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ದರ್ಶನ್ & ಗ್ಯಾಂಗ್ ನಿಂದ 139 ವಸ್ತುಗಳು ಜಪ್ತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ನಿಂದ ಸುಮಾರು 139 ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಸ್ಥಳಗಳಲ್ಲಿ ಸ್ಥಳ ಮಹಜರು ನಡೆಸಿ ಬಟ್ಟೆ, ಹಲ್ಲೆಗೆ ಬಳಸಿದ್ದ ಲಾಠಿ, ಶವ ಬಿಸಾಡಲು ಬಳಸಿದ್ದ ಕಾರು, ಆರೋಪಿಗಳ ಮೊಬೈಲ್, ಶೂ, ಮರದ ಪೀಸುಗಳು ಸೇರಿ ಸುಮಾರು 139 ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಕರಣದಲ್ಲಿ ಇದುವರೆಗೆ 28 ಕಡೆ ಸ್ಥಳ ಮಹಜರು ಮಾಡಲಾಗಿದೆ, ದರ್ಶನ್ ಸೇರಿ ಎಲ್ಲಾ ಆರೋಪಿಗಳ ನಿವಾಸ ಹಾಗೂ ಬೇರೆ ಕಡೆ 11 ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ . ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್ ಸೇರಿ ಹಲವು ಕಡೆ ಮಹಜರು ಮಾಡಲಾಗಿದೆ.

ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಶೆಡ್ ನಲ್ಲಿ ಬರ್ಬರವಾಗಿ ಕೊಂದು ನಂತರ ಶವ ಬಿಸಾಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...