
ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷ್ನರ್ ದಯಾನಂದ್, ಪ್ರಕರಣ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಬೇರೆ ಬೇರೆ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗವುದಿಲ್ಲ ಎಂದಿದ್ದಾರೆ.
ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ. ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ದೊರಕಿಸಿಕೊಡಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸವಾಗುತ್ತಿದೆ ಎಂದು ಹೇಳಿದರು.