
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷ್ನರ್ ದಯಾನಂದ್, ರೇಣುಕಾಸ್ವಾಮಿ ಹತ್ಯೆ ಕೇಸ್ ನ ರಿಪೋರ್ಟ್ ಸಿಕ್ಕಿದೆ. ಬೆಂಗಳೂರು ಎಫ್ಎಸ್ಎಲ್ ನಿಂದ ವರದಿ ಬಂದಿದೆ. ಇದೀಗ ಹೈದರಾಬಾದ್ ಎಫ್ಎಸ್ಎಲ್ ವರ್ದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.
ಹೈದರಾಬಾದ್ ಎಫ್ಎಸ್ಎಲ್ ವರದಿ ಬಂದ ತಕ್ಷಣ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು. ಅತಿಶೀಘ್ರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಗಲಿದೆ ಎಂದು ತಿಳಿಸಿದರು.