alex Certify ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಅರ್ಜಿ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.

ನಟ ದರ್ಶನ್ ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಸುನೀಲ್ ಕುಮಾರ್ ತಿಳಿಸಿದ್ದಾರೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಯಾವ ತೀರ್ಪು ಕೊಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಳ್ಳಾರಿ ಕಾರಾಗೃಹ ಸೇರಿದ್ದರು. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...