
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಉಳಿದ ಆರೋಪಿಗಳು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಬಂಧಿತರಾಗಿದ್ದಾರೆ. ನಾಳೆ ದರ್ಶನ್ ಹಾಗೂ ಗ್ಯಾಂಗ್ ನ ಕಸ್ಟಡಿ ಅವಧಿ ಮುಗಿಯಲಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕಮಿಷ್ನರ್ ದಯಾನಂದ್ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಕಮಿಷ್ನರ್ ದಯಾನಂದ್ ಅವರಿಗೆ ತನಿಖಾಧಿಕಾರಿ ಎಸಿಪಿ ಚಂದನ್, ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಸಾಥ್ ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕಮಿಷ್ನರ್ ಭೇಟಿ ತೀವ್ರ ಕುತೂಹಲ ಪಡೆದುಕೊಂಡಿದೆ.