ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ , ನಟ ದರ್ಶನ್ ಹಾಗೂ ಅವರ ಸಹಚರರ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿ ದರ್ಶನ್, ಎ 9 ಆರೋಪಿ ಧನರಾಜ್, ಎ 10 ಆರೋಪಿ ವಿನಯ್ ಹಾಗೂ ಎ 14 ಆರೋಪಿ ಪ್ರದೋಷ್ ಮೊಬೈಲ್ ಪರಿಶೀಲನೆಗೆ ಅನುಮತಿ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು.ಮನವಿ ಆಲಿಸಿದ ಕೋರ್ಟ್ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲನೆಗೆ ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.