ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಬಂಧಿಸಲಾಗಿದ್ದು, 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಆಘಾತಕಾರಿ ಮಾಹಿತಿಗಳು ಬಹಿರಂಗವಾಗುತ್ತಿವೆ.
ರೇಣುಕಾಸ್ವಾಮಿ ಕೊಲೆ ಬಳಿಕ ಶವ ಎಸೆದು, ಕೊಲೆ ಆರೋಪವನ್ನು ಹೊತ್ತಿಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.
ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿ ಕರೆತಂದು ಆರ್.ಆರ್.ನಗರ ಬಳಿಯ ಶೆಡ್ ನಲ್ಲಿ ಕೂಡಿಹಾಕಿ ಮಾರಣಾಂತಿಕವಾಗಿ ಹೊಡೆದು ಹತ್ಯೆಗೈದಿದ್ದು, ಬಳಿಕ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯ ಶವ ಸಾಗಿಸುವ ಬಗ್ಗೆ ದಾರಿ ಹುಡುಕಿದೆ. ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ನಟ ದರ್ಶನ್ ನೀಡಿದ್ದಾರೆ ಎನ್ನಲಾಗಿದೆ.
ಹಣ ಪಡೆದ ಗ್ಯಾಂಗ್ ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದೆ. ಮಾರಣೇ ದಿನ ಶವ ಪತ್ತೆಯಾದ ಬಳಿಕ ತಾವೇ ಕೊಲೆ ಮಡಿದ್ದಾಗಿ ಹೇಳಿ ಠಾಣೆಗೆ ಬಂದು ಒಪ್ಪಿಕೊಂಡಿದ್ದಾರೆ. ಕೊಲೆಗೆ ಹಣಕಾಸಿನ ವಿಚಾರವೇ ಕಾರಣ ಎಂದಿದ್ದಾರೆ. ಆದರೆ ಪೊಲೀಸರು ಒಬ್ಬೊಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಂತೆ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಂತೆ ಸತ್ಯಾಂಶ ಬಾಯ್ಬಿಟ್ಟಿದ್ದಾರೆ. ಇದೀಗ ದರ್ಶನ್ ಹಾಗೂ ಗ್ಯಾಂಗ್ ಜೊತೆ ಶವ ವಿಲೇವಾರಿ ಮಾಡಿದ್ದ ಗ್ಯಂಗ್ ಕೂಡ ಜೈಲಿನಲ್ಲಿದೆ.