ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ.
ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಈ ಆದೇಶ ಹೊರಡಿಸಿದೆ. ದರ್ಶನ್ ಪರ ವಕೀಲ ನಾಗೇಶ್ ಅವರ ವಾದ ಆಲಿಸಿದ ಕೋರ್ಟ್ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ಜಾಮೀನು ಸಿಗುತ್ತಾ..? ಅಥವಾ ನ್ಯಾಯಾಂಗ ಬಂಧನ ಅವಧಿ ಮುಂದುವರಿಕೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.