ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಮುಂದೂಡಿದೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಇಂದು ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ಪ್ರತಿವಾದ ಮಂಡನೆ ಆಲಿಸಿತು. ಬಳಿಕ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು.
ನಾಳೆ ಮಧ್ಯಾಹ್ನ 12:30ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.