ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಅಲ್ಲದೇ ನ್ಯೂರೋ ಸರ್ಜನ್ ಹೇಳಿರುವ ಕೆಲ ಅಂಶಗಳನ್ನು ಉಲ್ಲೇಖಿಸಿ, ಜಾಮೀನು ಮಂಜೂರು ಮಾಡುವಂತೆ ವಾದ ಮಂಡಿಸಿದರು. ಈ ವೇಳೆ ಎಸ್ ಪಿಪಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ನಾಳೆ ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗೆ ನಾಳೆವರೆಗೂ ಮತ್ತೆ ಜೈಲುವಾಸವೇ ಗತಿಯಾಗಿದೆ.