ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ ಕೋರ್ಟ್ ಗೆ ಹಾಜರಾಗಿದೆ.
ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ. ಕೋರ್ಟ್ ಹಾಲ್ ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಮುಖಾಮುಖಿಯಾದ ಸನ್ನಿವೇಶ ನಡೆದಿದೆ.
ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ವಾಸದ 6 ತಿಂಗಳ ಬಳಿಕ ಇದೀಗ ಕೋರ್ಟ್ ನಲ್ಲಿ ಮುಖಾಮುಖಿಯಾಗಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನ್ಯಾಯಾಮೂರ್ತಿಗಳು ಆರೋಪಿಗಳ ವಿಚಾರಣೆ ನಡೆಸಲಿದ್ದು, ಕೋರ್ಟ್ ಏನು ಹೇಳಲಿದೆ ಎಂಬುದು ಕುತೂಹಲ ಮೂಡಿಸಿದೆ.