alex Certify BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಗ್ಯಾಂಗ್ ನ ಪೊಲೀಸ್ ಕಸ್ಟಡಿ ಇಂದು ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲಿಸರು 13 ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರ‍ೇಟ್ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.

ಈ ವೇಳೆ ನಟ ದರ್ಶನ್ ಸೇರಿ ಆರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಎ1 ಆರೋಪಿ ಪವಿತ್ರಾ ಗೌಡ, ಪವನ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ಸೇರಿದಂತೆ 10 ಆರೋಪಿಗಳು ಜೈಲುಪಾಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...