alex Certify ಕ್ಲೈಮ್ಯಾಕ್ಸ್ ಹಂತ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್ : ಅ.14 ರಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಲೈಮ್ಯಾಕ್ಸ್ ಹಂತ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್ : ಅ.14 ರಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ.!

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದೆ. ಸದ್ಯ, ದರ್ಶನ್ ಅಭಿಮಾನಿಗಳ ಚಿತ್ತ ಕೋರ್ಟ್ ನತ್ತ.

ಹೌದು, ಅಕ್ಟೋಬರ್ 14 ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ಪ್ರತಿವಾದ ಮಂಡನೆ ಆಲಿಸಿತು. ಬಳಿಕ ದರ್ಶನ್ ಜಾಮೀನು ಆದೇಶವನ್ನು ಅ.14 ಕ್ಕೆ ಕಾಯ್ದಿರಿಸಿದೆ. ದಸರಾ ಹಬ್ಬದ ಬಳಿಕ ದರ್ಶನ್ ಗೆ ಬೇಲ್ ಸಿಗುತ್ತಾ ಅಥವಾ ಜೈಲೇ ಫಿಕ್ಸ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...