ಮುಂಬೈ: ಸತತ 9ನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇಟ್ಟಿದ್ದು, ಸಾಲದ ಮೇಲಿನ ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಸೆ ಮೂಡಿಸಿದೆ.
ಆರ್‌ಬಿಐನ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಗುರುವಾರ ಮುಕ್ತಾಯವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಲಾಗಿದೆ. ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಮ್ಮ ನಿರೀಕ್ಷೆಯ ಅನುಸಾರ ಹಣದುಬ್ಬರ ಇಳಿಕೆಯಾಗದ ಕಾರಣ ರೆಪೊ ದರವನ್ನು ಶೇಕಡ 6.50 ರಲ್ಲಿಯೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರೆಪೊ ದರ ಯಥಾಸ್ಥಿತಿಯ ಪರಿಣಾಮ ವಹಿವಾಟಿನಲ್ಲಿ ಅಸ್ಥಿರತೆ ಇಲ್ಲವಾಗಿ ಗೃಹ ಸಾಲ ಮಾಡಿದವರಿಗೆ ಇಎಂಐ ಹೊರೆ ಮುಂದುವರೆಯಲಿದೆ. ಗೃಹ, ವಾಹನ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿದರ ಇಳಿಕೆ ಸಾಧ್ಯತೆ ಕ್ಷೀಣವಾಗುತ್ತದೆ. ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತದೆ. ಹಣಕಾಸು ನೀತಿಯ ಸ್ಥಿರತೆ ರಿಯಲ್ ಎಸ್ಟೇಟ್ ಮಾರುಕಟ್ಟೆಗೆ ಲಾಭ ತರಲಿದೆ ಎಂದು ಹೇಳಲಾಗಿದೆ.