alex Certify ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದು, ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ಇದಲ್ಲದೆ ವಿಶೇಷ ಯೋಜನೆ ಜಾರಿ ಬಗ್ಗೆಯೂ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 100 ದಿನ ಪೂರೈಸಿದ್ದು, ಸಾಧನೆಯ ಕೈಪಿಡಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗಿತ್ತು. ಆದರೆ, ಸಾಧ್ಯವಾಗಿರಲಿಲ್ಲ. ವಿಧಾನಪರಿಷತ್ ಚುನಾವಣೆ ಮುಗಿದ ನಂತರ ಆಡಳಿತಕ್ಕೆ ವೇಗ ನೀಡಲಾಗುವುದು. ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುವ ಜೊತೆಗೆ ವಿಶೇಷ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಇನ್ನು ಜನರ ಮನೆಬಾಗಿಲಿಗೆ ಸೇವೆ ಒದಗಿಸುವ ಜನಸೇವಕ ಕಾರ್ಯಕ್ರಮವನ್ನು ರಾಜ್ಯದ್ಯಂತ ವಿಸ್ತರಿಸಲಾಗುತ್ತದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಜನಸೇವಕ ಯೋಜನೆಗೆ ಚಾಲನೆ ನೀಡಲಾಗಿದೆ. ಜನವರಿ 26 ರಿಂದ ರಾಜ್ಯಾದ್ಯಂತ ಯೋಜನೆಯನ್ನು ಹಂತಹಂತವಾಗಿ ವಿಸ್ತರಿಸಲಾಗುವುದು. ಜನರ ಮನೆಬಾಗಿಲಿಗೆ ಸೌಲಭ್ಯ ಕಲ್ಪಿಸಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...