ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಾಸಗಿ ವಾಹಿನಿ ಪತ್ರಕರ್ತ ಕೃಷ್ಣಮೂರ್ತಿ ಕುಲಕರ್ಣಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಮಹಿಷಿ ರಸ್ತೆಯಲ್ಲಿರುವ ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ಆರೋಪಿ ಫೆಬ್ರವರಿ 27 ರಿಂದ ಮಾರ್ಚ್ 1ರ ನಡುವೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವೈದ್ಯಕೀಯ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.