
75ನೇ ಗಣರಾಜ್ಯೋತ್ಸವದ ಅಂಗವಾಗಿ ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ತಿಳಿಸಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜ.25 ಮತ್ತು ಜ.26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಜ.26 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.