ಬೆಂಗಳೂರು: ಜನವರಿ 26 ರಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಅನುಮತಿ ನೀಡಲಾಗಿದೆ.
ಗಣರಾಜ್ಯೋತ್ಸವ ಆಚರಣೆಗೆ ಕಂದಾಯ ಇಲಾಖೆ ಅನುಮತಿ ನೀಡಿದೆ. ಧ್ವಜಾರೋಹಣ ಮಾಡಲು ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಗೆ ಅನುಮತಿ ನೀಡಲಾಗಿದೆ. ಎಸಿ ಅವರಿಗೆ ಧ್ವಜಾರೋಹಣ ಮಾಡಲು ಅನುಮತಿ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ್ ಆದೇಶಿಸಿದ್ದಾರೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಅಶೋಕ್ ಆದೇಶ ನೀಡಿದ್ದಾರೆ. ಇಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಸಚಿವರು ಅನುಮತಿ ನೀಡುವಂತೆ ಆದೇಶ ನೀಡಿದ್ದು, ನಾಳೆ ಬೆಳಗ್ಗೆ ಕಂದಾಯ ಇಲಾಖೆ ಅಧಿಕೃತ ಆದೇಶ ಹೊರಡಿಸಲಿದೆ. ಜಿಲ್ಲಾಡಳಿತದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.