alex Certify BREAKING NEWS: 76ನೇ ಗಣರಾಜ್ಯೋತ್ಸ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 76ನೇ ಗಣರಾಜ್ಯೋತ್ಸ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶದಯಂತ ರಾಷ್ಟ್ರಭಕ್ತಿ, ಸಡಗರ-ಸಂಭ್ರಮ ಮನೆ ಮಾಡಿದೆ. ದೆಹಲಿಯ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಪತಿ ಭವನದಿಂದ ಸಾರೋಟ್ ಮೂಲಕ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಶ್ವದಳದಿಂದ ಗೌರವ ಸಲ್ಲಿಸಲಾಯಿತು.

ಬಳಿಕ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬಾರಿ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಡೊನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೋ ಆಗಮಿಸಿದ್ದಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ 10 ಸಾವಿರ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.

ಕರ್ತವ್ಯಪಥದಲ್ಲಿ ಪಥಸಂಚಲನ ಆರಂಭವಾಗಿದ್ದು, 90 ನಿಮಿಷಗಳ ಕಾಲ ನಡೆಯಲಿದೆ. ಈ ಬಾರಿ ಪರೇಡ್ ವೀಕ್ಷಣೆಗೆ 45 ಸಾವಿರ ಜನರಿಗೆ ಅವಕಾಶ ನೀಡಲಾಗಿದೆ.

ನೆರೆದ ಗಣ್ಯರ ಮೇಲೆ ವಾಯುಸೇನೆಯಿಂದ ವಿಮಾನದಲ್ಲಿ ಶಕ್ತಿಪ್ರದರ್ಶನ ಮಾಡುವ ಮೂಲಕ ಪುಷ್ಪಾರ್ಚನೆ ಮಾಡಲಾಯಿತು. ಕರ್ತವ್ಯ ಪಥದಲ್ಲಿ 5 ಸಾವಿಕ ಕಲಾವಿದರು ಪ್ರದರ್ಶನ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...