ಬೆಂಗಳೂರು: ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ತುರ್ತಾಗಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, ಕೃಷ್ಣ ಭಾಗ್ಯ ಜಲ ನಿಗಮ, ಕಾವೇರಿ ನೀರಾವರಿ ನಿಗಮಗಳ ನಿರ್ದೇಶಕ ಮಂಡಳಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಚುರುಕಿನಿಂದ ನಿಗಮಗಳು ಕಾರ್ಯನಿರ್ವಹಿಸಬೇಕು. ತುರ್ತಾಗಿ ಆಗಬೇಕಿರುವ ಕೆಲಸ ಕಾರ್ಯಗಳಿಗೆ ಒಟ್ಟು ನೀಡಬೇಕು. ಕಾಲುವೆ, ಸೇತುವೆ, ರಸ್ತೆಗಳ ಸ್ಥಿತಿಗತಿ, ದುರಸ್ತಿ, ಅದಕ್ಕೆ ತಗಲುವ ವೆಚ್ಚದ ಅಂದಾಜು ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಶಾಸಕರು ನಿಗಮಗಳಡಿ ಬರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿ ಬೇಡಿಕೆ ಈಡೇರಿಸಲು ಹೆಚ್ಚಿನ ಒತ್ತು ನೀಡಬೇಕೆಂದು ಸಿಎಂ ತಾಕೀತು ಮಾಡಿದ್ದಾರೆ.