ಬೆಂಗಳೂರು: ಮೇಲ್ವರ್ಗದ ಬಡವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 10 ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲಾಗಿದೆ. ಮೀಸಲಾತಿ ಸಂಬಂಧ ಮಾಡಲಾದ 103ನೇ ತಿದ್ದುಪಡಿ ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ ಎಂದರು.
ಈಗಾಗಲೇ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಎಲ್ಲಾ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಕ್ಷಣದಿಂದಲೇ ಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಗಳು ಕೂಡ ಈ ಸಂಬಂಧ ಹೇಳಿಕೆ ನೀಡಿದ್ದು, ಮೇಲ್ವರ್ಗದ ಮೀಸಲಾತಿ ರಾಜ್ಯದಲ್ಲಿಯೂ ಜಾರಿಯಾಗಲಿದೆ ಎಂದು ಹೇಳಿದ್ದಾರೆ.