
ಚಿತ್ರದುರ್ಗ: ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಹೊಸದುರ್ಗದಲ್ಲಿ ಮಾತನಾಡಿದ ಅವರು, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಮಾದಿಗರು ಸೇರಿ ಎಲ್ಲರಿಗೂ ಮೀಸಲಾತಿ ವರ್ಗೀಕರಣದ ಅವಶ್ಯಕತೆ ಇದ್ದು, ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಒಳಮೀಸಲಾತಿ ಜಾರಿಯಿಂದ ಲಂಬಾಣಿ, ಭೋವಿ ಸಮುದಾಯ ಸೇರಿದಂತೆ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.