ದಾವಣಗೆರೆ: ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡುವ ಬಗ್ಗೆ, ಹಿಂದುಳಿದ ಸಮಾಜಕ್ಕೆ ನ್ಯಾಯ ಒದಗಿಸುವ ಬಗ್ಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಮೀಸಲಾತಿಗೆ ಹೋರಾಟ ನಡೆಸುವುದು ಅವರ ಹಕ್ಕು ಎಂದು ಮೀಸಲಾತಿಗಾಗಿ ವಿವಿಧ ಸಮುದಾಯಗಳ ಹೋರಾಟಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಮೀಸಲಾತಿ ಹೋರಾಟ ನ್ಯಾಯಬದ್ಧವಾಗಿದೆ. ಮೀಸಲಾತಿಯನ್ನು ಹೇಗೆ ನೀಡಬೇಕೆಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ಒದಗಿಸಲಾಗುವುದು. ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.