ಬೆಂಗಳೂರು: ಅಪೆಕ್ಸ್ ಮಂಡಳಿಗಳಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ನಲ್ಲಿ ಮಂಡಿಸಿದ್ದಾರೆ.
ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024 ಮತ್ತು ಕರ್ನಾಟಕ ಸಹಕಾರಿ ಸಂಘಗಳ(ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನ ಪರಿಷತ್ ನಲ್ಲಿ ಸೋಮವಾರ ಅಂಗೀಕಾರ ದೊರೆತಿದೆ.
ಸಹಕಾರಿ, ಸಂಯುಕ್ತ ಸಹಕಾರಿ ಮತ್ತು ಅಪೆಕ್ಸ್ ಸಹಕಾರಿ ಮಂಡಳಿಯಲ್ಲಿ ಪ್ರಾತಿನಿತ್ಯ ಇಲ್ಲದ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ವಿಧೇಯಕಕ್ಕೆ ವಿಧಾನಪರಿಷತ್ ನಲ್ಲಿ ಅಂಗೀಕಾರ ನೀಡಲಾಗಿದೆ.