ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೌದು, ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಟ್ವೀಟ್ ನಲ್ಲಿ ಯಾವುದಾದರೂ ತಪ್ಪಿರುವ ಕಾರಣಕ್ಕೆ ಡಿಲೀಟ್ ಮಾಡಲಾಯಿತಾ..? ಅಥವಾ ಬೇರೆ ಇನ್ಯಾವುದೋ ಕಾರಣಕ್ಕೆ ಟ್ವೀಟ್ ಡಿಲೀಟ್ ಆಯಿತಾ..? ಎಂಬ ಹಲವು ಪ್ರಶ್ನೆ ಹುಟ್ಟಿದೆ. ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಂಡಿರುವ ವಿಚಾರ ಕನ್ನಡಿಗರಿಗೆ ಖುಷಿ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಟ್ವೀಟ್ ಡಿಲೀಟ್ ಆಗಿರುವ ಬಗ್ಗೆ ಸರ್ಕಾರ ಯಾವ ರೀತಿ ಸ್ಪಷ್ಟನೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಖಾಸಗಿ ಕಂಪನಿಗಳಲ್ಲಿ ಶೇ.50-75ರಷ್ಟು ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.