
ಬೆಂಗಳೂರು: ಮೀಸಲಾತಿ ಬೇಡಿಕೆ ಪರಾಮರ್ಶೆಗೆ ರಾಜ್ಯ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.
ಪಂಚಮಸಾಲಿ, ಕುರುಬ ಸಮುದಾಯ, ಒಕ್ಕಲಿಗರು, ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪರಾಮರ್ಶೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾ. ಸುಭಾಷ್ ಅಡಿ ಅಧ್ಯಕ್ಷತೆಯ ಸಮಿತಿಯನ್ನು ರಚಿಸಲಾಗಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಮೈಸೂರು ಮಹಾರಾಣಿ ಕಾಲೇಜು ಸಹಪ್ರಾಧ್ಯಾಪಕ ಡಾ. ಬಿ.ವಿ. ವಸಂತಕುಮಾರ್ ಸಮಿತಿ ಸದಸ್ಯರಾಗಿರುತ್ತಾರೆ.