ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.
ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ಇಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನೆ ಅರ್ಜಿಯ ವಿಚಾರಣೆ ಜೂನ್ 28 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಮಹಾರಾಷ್ಟ್ರ ಸರ್ಕಾರ ಈಗಿರುವ ಶೇಕಡ 50 ರಷ್ಟು ಮೀಸಲಾತಿಗೆ ಹೆಚ್ಚುವರಿಯಾಗಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಕಾಯ್ದೆಯನ್ನು ಅಂಗೀಕರಿಸಿದೆ. ಸುಪ್ರೀಂಕೋರ್ಟ್ ಮೇ 5 ರಂದು ನೀಡಿದ ಆದೇಶದಲ್ಲಿ ಇದನ್ನು ರದ್ದುಪಡಿಸಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಘೋಷಣೆ ಮಾಡುವ ಅಧಿಕಾರ ರಾಜ್ಯಗಳಿಗೆ ಇಲ್ಲವೆಂದು ತೀರ್ಪು ನೀಡಿದೆ.