ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR) ಸೂಚನೆ ನೀಡಿದೆ.
ಅಕ್ಟೋಬರ್ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವರದಿ ನೀಡಲು ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದೆ. ಮೂರು ತಿಂಗಳಲ್ಲಿ ವರದಿ ನೀಡುವಂತೆ ಆಯೋಗದ ಮುಖ್ಯಸ್ಥರಿಗೆ ಸೂಚಿಸಿದೆ. ಈ ವರದಿಯ ಬಗ್ಗೆ ಅಂತಿಮ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಿರಲು ತೀರ್ಮಾನ ಕೈಗೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಲೋಕಸೇವಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.