ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಅನುದಾನ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಕೊಡುಗೆ ಘೋಷಣೆ ಮಾಡಲಿದ್ದಾರೆ.
ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ. ಸಂಪುಟ ಸಭೆಯ ಬಳಿಕ ಯಡಿಯೂರಪ್ಪ ಅವರೇ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಲಿಂಗಾಯಿತ ಸಮುದಾಯಕ್ಕೆ ಇತರೆ ಹಿಂದುಳಿದ ವರ್ಗಗಳ ಒಬಿಸಿ ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.