ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆ.
ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಿಗಾಗಿ ಒಬಿಸಿ ಮೀಸಲಾತಿ ಪಟ್ಟಿಯನ್ನು ತಯಾರಿಸುವ ಅಧಿಕಾರವನ್ನು ರಾಜ್ಯಗಳಿಗೆ ಮರಳಿ ನೀಡುವ ಮಹತ್ವದ ತಿದ್ದುಪಡಿ ಮಸೂದೆ ಇದಾಗಿದೆ. 15 ವಿಪಕ್ಷಗಳು ಬೆಂಬಲ ನೀಡುವುದಾಗಿ ಹೇಳಿರುವುದರಿಂದ ಶೀಘ್ರವೇ ಮಸೂದೆ ಅಂಗೀಕಾರವಾಗಲಿದೆ.
ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರು ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿ ಬಗ್ಗೆ ಹೋರಾಟ ನಡೆಸುತ್ತಿದ್ದು, ರಾಜ್ಯಗಳೇ ನಿರ್ಧಾರ ಕೈಗೊಳ್ಳುವುದರಿಂದ ಅನುಕೂಲವಾಗಲಿದೆ. ಜೊತೆಗೆ ಮೀಸಲಾತಿ ವಿಚಾರದಲ್ಲಿ ಗೊಂದಲವೂ ಉಂಟಾಗಬಹುದು ಎಂದು ಹೇಳಲಾಗಿದೆ.