alex Certify ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ

ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆ.

ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಿಗಾಗಿ ಒಬಿಸಿ ಮೀಸಲಾತಿ ಪಟ್ಟಿಯನ್ನು ತಯಾರಿಸುವ ಅಧಿಕಾರವನ್ನು ರಾಜ್ಯಗಳಿಗೆ ಮರಳಿ ನೀಡುವ ಮಹತ್ವದ ತಿದ್ದುಪಡಿ ಮಸೂದೆ ಇದಾಗಿದೆ. 15 ವಿಪಕ್ಷಗಳು ಬೆಂಬಲ ನೀಡುವುದಾಗಿ ಹೇಳಿರುವುದರಿಂದ ಶೀಘ್ರವೇ ಮಸೂದೆ ಅಂಗೀಕಾರವಾಗಲಿದೆ.

ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರು ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿ ಬಗ್ಗೆ ಹೋರಾಟ ನಡೆಸುತ್ತಿದ್ದು, ರಾಜ್ಯಗಳೇ ನಿರ್ಧಾರ ಕೈಗೊಳ್ಳುವುದರಿಂದ ಅನುಕೂಲವಾಗಲಿದೆ. ಜೊತೆಗೆ ಮೀಸಲಾತಿ ವಿಚಾರದಲ್ಲಿ ಗೊಂದಲವೂ ಉಂಟಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...