
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡ ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳು, ವಸ್ತು ಪ್ರದರ್ಶಗಳು ನಡೆಯುತ್ತಿವೆ.
ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿ ವಸ್ತು ಪ್ರದರ್ಶನದ ಆವರಣದಲ್ಲಿದ್ದ ರೇಷ್ಮೆ ಸೀರೆ ಅಂಗಡಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಅಲ್ಲಿದ್ದ ಸೀರೆ ಬೆಲೆ ಕೇಳಿ ಶಾಕ್ ಆಗಿದ್ದಾರೆ.
ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ ಒಂದು ರೌಂD ಹಾಕಿದ ಸಿಎಂ ಸಿದ್ದರಾಮಯ್ಯ ರೇಷ್ಮೆ ಸೀರೆ ಅಂಗಡಿಗೆ ಭೇಟಿ ನೀಡಿದರು. ಈ ವೇಳೆ ರೇಷ್ಮೆ ಸೀರೆ ಬೆಲೆ ಕೇಳಿದ್ದು ಒಂದು ಸೀರೆಗೆ 20,000 ರೂಪಾಯಿ ಎಂದು ಅಂಗಡಿಯವರು ಹೇಳಿದ್ದಾರೆ.
ರೇಷ್ಮೆಸೀರೆ ಬೆಲೆ ಕೇಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್ ಸಾಹ್ ನೀಡಿದ್ದರು.