alex Certify ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ ಮಾಡಲಾಗಿದೆ.

ಪ್ರಕರಣ ಸಂಬಂಧ ಇನ್ನೂ ಯಾವುದೇ ಬಂಧನವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

BIG BREAKING NEWS: ಕೊರೋನಾ ರೋಗಿಗಳಿಗೆ ನೇಸಲ್ ಸ್ಟ್ರೇ ಮಾರುಕಟ್ಟೆಗೆ ಬಿಡುಗಡೆ

“ನಿವಾಸಿ ವೈದ್ಯರ ಮೇಲೆ ಗುಂಡು ಹಾರಿಸಿದ ಘಟನೆಯೊಂದು ಜೆಪಿ ಕಲನ್‌‌ನ ಆರ್‌ಟಿಆರ್‌ ಆಸ್ಪತ್ರೆಯಿಂದ ವರದಿಯಾಗಿದೆ. ಸಂತ್ರಸ್ತರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ. ಕೊಲೆಗೆ ಯತ್ನ ಮತ್ತು ಶಸ್ತ್ರ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ದುಷ್ಕರ್ಮಿಗಳನ್ನು ಸೆರೆ ಹಿಡಿಯಲು ತಂಡಗಳನ್ನು ರಚಿಸಲಾಗಿದೆ,” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...