ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಅಪ್ರಾಪ್ತರು ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದ ಸಮಿತಿ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.
ಶಿವಕುಮಾರ್ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಅರಕಲಗೂಡು ಗ್ರಾಮಾಂತರ ಠಾಣೆ ಪೊಲಿಸರು ಬಂಧಿಸಿದ್ದಾರೆ.