
ತುಮಕೂರು: ವಸತಿ ಶಾಲೆ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ.
8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್ (13) ಮೃತ ವಿದ್ಯಾರ್ಥಿ. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಬಾಲಕ ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ದಾಖಲಿಸಿ ಸೂಚನೆ ಚಿಕಿತ್ಸೆ ನೀಡದೇ ವಾರ್ಡನ್ ಹಾಗೂ ಪ್ರಾಂಶುಪಾಲರು ನಿರ್ಲಕಷ ಮಾಡಿದ್ದಾರೆ. ಹಾಸ್ಟೇಲ್ ಕೊಠಡಿಯಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.
ವಸತಿ ಶಾಲೆಯ ಪ್ರಾಂಶುಪಾಲರು ಹಗೂ ವಾರ್ಡನ್ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಮೃತ ವಿದ್ಯಾರ್ಥಿ ಕೊರಟಗೆರೆಯ ತಿಮ್ಮನಹಳ್ಳಿ ನಿವಾಸಿ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.