ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯೊಬ್ಬರ ವಿರುದ್ಧ ಪೋಷಕರು ಗಂಭೀರ ಆರೋಪ ಮಾಡಿದ್ದು, ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದಾಗಿ ದೂರಿದ್ದಾರೆ.
ಚಿಕ್ಕಮಗಳೂರಿನ ಅಂಬೆಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕಿ ದೀಪಾ ಎಂಬುವವರು ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಕಾರಣವಿಲ್ಲದೇ ಅನಗತ್ಯವಾಗಿ ಹಲ್ಲೆ ಮಾಡಿದ್ದು, ಮಕ್ಕಳು ಗಾಯಗೊಂಡಿದ್ದಾರೆ.
ಶಿಕ್ಷಕಿಯ ವಿರುದ್ಧ 40 ಮಕ್ಕಳು ಪೋಷಕರು ಲಿಖಿತ ದೂರು ನೀಡಿದ್ದು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯೋಗೇಶ್ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.