ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ರಚನೆ, ಖಾತೆ ಹಂಚಿಕೆ ನಂತರ ಅಸಮಾಧಾನ ಭುಗಿಲೆದ್ದಿದೆ. ಪ್ರಬಲ ಖಾತೆ ಸಿಗದೇ ಬೇಸರಗೊಂಡಿರುವ ಆನಂದ್ ಸಿಂಗ್ ಮುಚ್ಚಿದ ಲಕೋಟೆಯಲ್ಲಿ ಮುಖ್ಯಮಂತ್ರಿಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಭಾನುವಾರ ಸಿಎಂ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ ಆನಂದ್ ಸಿಂಗ್ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವದಂತಿ ಹರಡಿದೆ. ಆನಂದ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದು, ಅದರ ಬದಲು ಬೇರೆ ಕೊಡಬೇಕು ಎಂದು ಸಿಎಂ ಭೇಟಿಯಾಗಿ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಪ್ರಬಲ ಖಾತೆ ಸಿಗದಿದ್ದರೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.