ಜೂ. 17 ಬಸವರಾಜ ಬೊಮ್ಮಾಯಿ ರಾಜೀನಾಮೆ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ -ಸವಣರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ ನೀಡಲಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 17ರಂದು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಂತರ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಪಕ್ಷ ಸಮೀಕ್ಷೆ ನಡೆಸಿ ಜನ ಅಭಿಪ್ರಾಯ ಯಾರ ಪರ ಇದೆಯಾ ಅವರಿಗೆ ಟಿಕೆಟ್ ನೀಡಲಿದೆ ಎಂದು ಹೇಳಿದ್ದಾರೆ.

ನಮ್ಮಲ್ಲಿಯೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ನಾವು ಉಪಚುನಾವಣೆಯಲ್ಲಿ ಜಯಗಳಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿಯವರ ಸಂಪುಟದಲ್ಲಿ ಈ ಬಾರಿ ಮೈತ್ರಿ ಪಕ್ಷಗಳಿಗೆ ಹಾಗೂ ಆ ಪಕ್ಷಗಳಲ್ಲಿ ಅನುಭವ ಇರುವ ನಾಯಕರಿಗೆ ಆದ್ಯತೆ ನೀಡುವ ಅಗತ್ಯವಿತ್ತು. ಹೀಗಾಗಿ ನನಗೆ ಮಂತ್ರಿ ಸ್ಥಾನ ತಪ್ಪಿರಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read