ತಿರುವನಂತಪುರಂ: ನಮ್ಮ ಸಂವಿಧಾನ ಶೋಷಣೆ ಬಗ್ಗೆ ಗಮನಹರಿಸುವುದಿಲ್ಲ. ದೇಶದ ಜನರನ್ನು ಲೂಟಿ ಮಾಡಲು ನೆರವಾಗುವ ರೀತಿಯಲ್ಲಿ ಭಾರತದ ಸಂವಿಧಾನ ಬರೆಯಲಾಗಿದೆ ಎಂದು ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಕೇರಳ ಸಚಿವನ ತಲೆದಂಡವಾಗಿದೆ.
ಮೀನುಗಾರಿಕೆ ಮತ್ತು ಸಂಸ್ಕೃತಿ ಸಚಿವ ಸಜಿ ಚೆರಿಯನ್ ಅವರು ಸಂವಿಧಾನವನ್ನು ಟೀಕಿಸಿದ್ದರು. ಅವರ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಸಜಿ ಚೆರಿಯನ್ ಸಂವಿಧಾನದ ಕುರಿತು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ತಕ್ಷಣವೇ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದವು.
ಸಜಿ ಚೆರಿಯನ್ ಸಂವಿಧಾನದ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಭಾರಿ ಪ್ರತಿಭಟನೆ ವ್ಯಕ್ತವಾಗಿತ್ತು. ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.