
ಬೆಂಗಳೂರು: ಕಾಂಗ್ರೆಸ್ ಎಷ್ಟೇ ಪ್ರತಿಭಟನೆ ಮಾಡಿದರೂ ರಾಜೀನಾಮೆ ಕೊಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಪ್ರತಿಭಟನೆ ಮಾಡಿಕೊಳ್ಳಲಿ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ಮೊದಲು ರಾಜೀನಾಮೆ ಕೊಡಲಿ. ರಾಷ್ಟ್ರಧ್ವಜವನ್ನು ದುರುಪಯೋಗ ಮಾಡಿಕೊಂಡವರು ಡಿ.ಕೆ. ಶಿವಕುಮಾರ್ ಎಂದು ಆರೋಪಿಸಿದ್ದಾರೆ.
ಜಾಮೀನಿನ ಮೇಲೆ ಹೊರಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲು ರಾಜೀನಾಮೆ ನೀಡಲಿ. ನಾನು ರಾಷ್ಟ್ರಭಕ್ತ, ನಾನೇಕೆ ರಾಜೀನಾಮೆ ನೀಡಲಿ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.