
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. 2018 ರ ಡಿಸೆಂಬರ್ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಇಂದು ನಡೆದ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯ ಪ್ರಾಣೇಶ್ ಉಪಸಭಾಪತಿಯಾಗಿದ್ದಾರೆ. ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ.